Nadageethe in Kannada | ನಾಡಗೀತೆ ಕನ್ನಡ

0
1030
Nadageethe in Kannada | ನಾಡಗೀತೆ ಕನ್ನಡ

Nadageethe in Kannada, ನಾಡಗೀತೆ ಕನ್ನಡ, nadageethe information in kannada, ನಾಡಗೀತೆ ಕನ್ನಡ ಸಾಂಗ್, ಜಯ ಭಾರತ ಜನನಿಯ ತನುಜಾತೆ


Contents

Nadageethe in Kannada

Nadageethe in Kannada
Nadageethe in Kannada ನಾಡಗೀತೆ ಕನ್ನಡ

ಈ ಲೇಖನಿಯಲ್ಲಿ ನಾಡಗೀತೆ ಬಗ್ಗೆ ಮಾಹಿತಿಯನ್ನು ನಿಮಗೆ ಅನುಕೂಲವಾಗುವಂತೆ ನಮ್ಮ post ನಲ್ಲಿ ತಿಳಿಸಿದ್ದೇವೆ.

ನಾಡಗೀತೆ ಕನ್ನಡ

ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಜಯ ಸುಂದರ ನದಿ ವನಗಳ ನಾಡೇ,
ಜಯ ಹೇ ರಸಋಷಿಗಳ ಬೀಡೆ!
ಭೂದೇವಿಯ ಮಕುಟದ ನವಮಣಿಯೆ,
ಗಂಧದ ಚಂದದ ಹೊನ್ನಿನ ಗಣಿಯೆ;
ರಾಘವ ಮಧುಸೂಧನರವತರಿಸಿದ
ಭಾರತ ಜನನಿಯ ತನುಜಾತೆ !

ಜನನಿಯ ಜೋಗುಳ ವೇದದ ಘೋಷ,
ಜನನಿಗೆ ಜೀವವು ನಿನ್ನಾವೇಶ
ಹಸುರಿನ ಗಿರಿಗಳ ಸಾಲೇ,ನಿನ್ನಯ ಕೊರಳಿನ ಮಾಲೆ
ಕಪಿಲ ಪತಂಜಲ ಗೌತಮ ಜಿನನುತ,
ಭಾರತ ಜನನಿಯ ತನುಜಾತೆ !

ಶಂಕರ ರಾಮಾನುಜ ವಿದ್ಯಾರಣ್ಯ,
ಬಸವೇಶ್ವರ ಮಧ್ವರ ದಿವ್ಯಾರಣ್ಯ
ರನ್ನ ಷಡಕ್ಷರಿ ಪೊನ್ನ,
ಪಂಪ ಲಕುಮಿಪತಿ ಜನ್ನ
ಕುಮಾರವ್ಯಾಸನ ಮಂಗಳ ಧಾಮ,
ಕವಿ ಕೋಗಿಲೆಗಳ ಪುಣ್ಯಾರಾಮ
ನಾನಕ ರಾಮಾನಂದ ಕಬೀರರ
ಭಾರತ ಜನನಿಯ ತನುಜಾತೆ !

ತೈಲಪ ಹೊಯ್ಸಳರಾಳಿದ ನಾಡೇ,
ಡಂಕಣ ಜಕಣರ ನಚ್ಚಿನ ಬೀಡೆ
ಕೃಷ್ಣ ಶರಾವತಿ ತುಂಗ,
ಕಾವೇರಿಯ ವರ ರಂಗ
ಚೈತನ್ಯ ಪರಮಹಂಸ ವಿವೇಕರ,
ಭಾರತ ಜನನಿಯ ತನುಜಾತೆ !

ಸರ್ವ ಜನಾಂಗದ ಶಾಂತಿಯ ತೋಟ,
ರಸಿಕರ ಕಂಗಳ ಸೆಳೆಯುವ ನೋಟ
ಹಿಂದೂ ಕ್ರೈಸ್ತ ಮುಸಲ್ಮಾನ,
ಪಾರಸಿಕ ಜೈನರುದ್ಯಾನ
ಜನಕನ ಹೋಲುವ ದೊರೆಗಳ ಧಾಮ,
ಗಾಯಕ ವೈಣಿಕರಾರಾಮ
ಕನ್ನಡ ನುಡಿ ಕುಣಿದಾಡುವ ಗೇಹ,
ಕನ್ನಡ ತಾಯಿಯ ಮಕ್ಕಳ ದೇಹ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ

ಜಯ್‌ ಸುಂದರ ನದಿ ವನಗಳ ನಾಡೆ,
ಜಯ ಹೇ ರಸಋಷಿಗಳ ಬೀಡೆ.

FAQ

ಕರ್ನಾಟಕದ ನಾಡಗೀತೆಯನ್ನು ಬರೆದವರು ಯಾರು?

ಕುವೆಂಪು.

ಭಾರತದ ನಾಡಗೀತೆ ಯಾವುದು?

“ಒಂದೇ ಮಾತಂ”

ಇತರೆ ವಿಷಯಗಳು:

ರವೀಂದ್ರನಾಥ ಟ್ಯಾಗೋರ್ ಅವರ ಜೀವನ ಚರಿತ್ರೆ 

ಭಾರತದ ರಾಷ್ಟ್ರಗೀತೆಯ ಮಹತ್ವ

ರಾಷ್ಟ್ರೀಯ ಹಬ್ಬಗಳ ಮಹತ್ವ ಪ್ರಬಂಧ

LEAVE A REPLY

Please enter your comment!
Please enter your name here